ಆಡು ಮತ್ತು ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕೆಳಕಂಡ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಫೆಬ್ರವರಿ 26 ರಿಂದ ಮಾರ್ಚ್ 7 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಫೆಬ್ರವರಿ 25 ಕೊನೆಯ ದಿನವಾಗಿದೆ. ಮಾರ್ಚ್ 17 ರಿಂದ ಏಪ್ರಿಲ್ 15 ರವರೆಗೆ ವಸ್ತ ಚಿತ್ರಕಲಾ ಉದ್ಯಮಿ (ಕಸೂತಿ ಮತ್ತು ಬಟ್ಟೆಯ ಚಿತ್ರಕಲೆ) ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಮಾರ್ಚ್ 16 ಕೊನೆಯ ದಿನವಾಗಿದೆ.

ಊಟ ವಸತಿ ಎರಡು ಉಚಿತ!

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಅರ್ಹತೆಗಳು?

ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್.. ಅಂತ್ಯೋದಯ ರೇಷನ್, ಎಮ್‌ಜಿಎನ್‌ಆರ್‌ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನು ಓದಿ: ಕೃಷಿ ಭಾಗ್ಯ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

ಇದನ್ನು ಓದಿ: ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕ್ಯಾನ್ಸಲ್..!ಅನ್ನಭಾಗ್ಯ ಯೋಜನೆ ಹಣ ಕೂಡ ಬಂದ್ !

Admin
Author

Admin

2 thoughts on “ಆಡು ಮತ್ತು ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

Leave a Reply

Your email address will not be published. Required fields are marked *