ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

12ರವರೆಗೆ ವಿವಿಧೆಡೆ ಮಳೆ ಬೆಂಗಳೂರು?

ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ ಭರ್ಜರಿಯಾಗಿ ಬಂದಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಿವಿಧೆಡೆ ಮಳೆ ಮುಂದುವರಿದಿದೆ. ಜಿಲ್ಲೆಯ ಅನೇಕ ಕಡೆ ಶನಿವಾರ ಸಂಜೆ ಮೋಡ ಕವಿದ ವಾತಾವರಣವಿದ್ದು ಕೆಲವು ಕಡೆಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಸಾಗಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಬಳಿಕ, ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಉಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮುಂದಿನ 2 ದಿನದ ಬಳಿಕ 2-4 ಡಿ.ಸೆ. ಉಷ್ಣಾಂಶ ಹೆಚ್ಚಳವಾಗಲಿದೆ.

ಕರಾವಳಿ ಕರ್ನಾಟಕ:

Day 1

06/04/2025:ಎಲ್ಲಾ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Day 2

07/04/2025:ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಸಾಧ್ಯತೆ ಇದೆ.

Day 3

08/04/2025:ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಸಾಧ್ಯತೆ ಇದೆ.

Day 4

09/04/2025:ಎಲ್ಲ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

Day 5

10/04/2025:ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಉತ್ತರ ಒಳನಾಡು;

Day 1

06/04/2025:ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ (40-50 ಕಿಮೀ) ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.

Day 2

07/04/2025:ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (30-40 kmph) ಗಾಳಿಯೊಂದಿಗೆ ಲಘು ಮಳೆ / ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.

Day 3

08/04/2025:ಬೆಳಗಾವಿ, ವಿಜಯಪುರ, ಬಾಗಲಕೋಟೆ ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ

Day 4

09/04/2025:ಬೀದರ್, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ ಲಘು ಮಳೆಯಾಗುವ ಸಾಧ್ಯತೆ ಇದೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ

Day 5

10/04/2025:ವಿಜಯಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.

ಕರ್ನಾಟಕದ ದಕ್ಷಿಣ ಒಳನಾಡು;

Day 1

06/04/2025 :ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ (30-40 ಕಿಮೀ) ಗಾಳಿಯೊಂದಿಗೆ ಲಘು ಮಳೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.

Day 2

07/04/2025:ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (30-40 kmph) ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ

Day 3

08/04/2025: ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.

Day 4

09/04/2025:ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ

ಇದನ್ನು ಓದಿ:ರೈತರಿಗೆ ಹತ್ತು ದಿನಗಳ ಕಾಲ ಉಚಿತ ಊಟ ವಸತಿಯೊಂದಿಗೆ ತರಬೇತಿ ನೀಡಲು ಮತ್ತು ಲೋನ್ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ
https://krushiyogi.com/archives/1075

ಇದನ್ನು ಓದಿ:ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ! https://krushiyogi.com/archives/1056

Admin
Author

Admin

One thought on “ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

Leave a Reply

Your email address will not be published. Required fields are marked *