ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

WhatsApp Group Join Now
Telegram Group Join Now

ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 9 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 22°C ಇರಬಹುದು.

ಏಪ್ರಿಲ್ 10 ರಂದು ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಮೈಸೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

WhatsApp Group Join Now
Telegram Group Join Now

1 thought on “ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!”

Leave a Comment