ಮುಂದಿನ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ?

WhatsApp Group Join Now
Telegram Group Join Now

ಬೆಂಗಳೂರು: ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ನೂ ಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮ ಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಏ.1 ಮತ್ತು 2ರಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಏ.3ರಿಂದ 5ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ:ಇಂದಿನಿಂದ ರಾಜ್ಯದಲ್ಲಿ ಹಾಲಿನ ಪ್ಯಾಕೆಟ್ ದರ ಏರಿಕೆ ಯಾವ ಹಾಲಿನ ಪ್ಯಾಕೆಟ್ಗೆ ಎಷ್ಟು ಏರಿಕೆಯಾಗಿದೆ ಗೊತ್ತಾ? 

ಉತ್ತರ ಒಳನಾಡಿ ನಲೂ ಹಗುರ ಮಳೆ ಯಾಗಬಹುದು. ಏ.2ರಿಂದ 4ರ ನಡುವೆ ಮೂರು ದಿನ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ತಾಪಮಾನ ದಲ್ಲಿ ಅಲ್ಪ ಇಳಿಕೆಯಾಗಲಿದೆ.

ಇದನ್ನು ಓದಿ:ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಹೇಗಿದೆ ನೋಡಿ?

WhatsApp Group Join Now
Telegram Group Join Now

Leave a Comment