ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ!

WhatsApp Group Join Now
Telegram Group Join Now

22.03.2025

ಕೊಡಗು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾದ್ಯತೆ ಇದೆ.

23.03.2025

ಮೈಸೂರು, ಚಾಮರಾಜನಗರ ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನಿನ್ನೆ ಮಳೆಯಾಗಿದೆ. ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲಿ ಮಳೆಯಾಗಲಿದೆ ಎಂದು IMD ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ:ಉಚಿತವಾಗಿ 10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! 
ಇದನ್ನು ಓದಿ:ಈ ರೈತರಿಗೆಲ್ಲ ಸಿಗಲಿದೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಬಡ್ಡಿ ರಹಿತ ಮೂರು ಲಕ್ಷದಿಂದ 5 ಲಕ್ಷದವರೆಗೆ

WhatsApp Group Join Now
Telegram Group Join Now

Leave a Comment