ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ!

WhatsApp Group Join Now
Telegram Group Join Now

 ಚಂಡಮಾರುತದ ಪರಿಚಲನೆಯ ಪರಿಣಾಮವಾಗಿ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ. ಗುಡುಗು ಮತ್ತು ಮಿಂಚಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು, ಬಿರುಗಾಳಿಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಓಡಾಡದಿರುವುದು ಮುಖ್ಯವಾಗಿದೆ.

ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ.

ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾದ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ.

ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ.

WhatsApp Group Join Now
Telegram Group Join Now