April rain Karnataka- ಕರ್ನಾಟಕದಲ್ಲಿ ಮಳೆ ಅಬ್ಬರ! ನಿಮ್ಮ ಜಿಲ್ಲೆಯ ಮುನ್ಸೂಚನೆ ತಿಳಿಯಿರಿ!

ರಾಜ್ಯದ ಕರಾವಳಿ ತೀರದ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಾದ ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಏಪ್ರಿಲ್ 27 ರಂದು ಹಗುರವಾದ ಮಳೆಯಿಂದ ಸಾಧಾರಣ ಮಳೆಯವರೆಗೆ ನಿರೀಕ್ಷಿಸಬಹುದು. ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಮತ್ತು ಗಾಳಿಯು ಬೀಸುವ ಸಾಧ್ಯತೆ ಇದೆ.

ಏಪ್ರಿಲ್ 28 ರಂದು, ಕರಾವಳಿ ಜಿಲ್ಲೆಗಳಲ್ಲದೆ, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 29 ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬೀದರ್, ಯಾದಗಿರಿ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಲಘು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು.

ಏಪ್ರಿಲ್ 30 ರಂದು ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಹಾವೇರಿ, ಧಾರವಾಡ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಮಳೆ ನಿರೀಕ್ಷಿಸಬಹುದು. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಮೇ 1 ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.

ಒಟ್ಟಾರೆಯಾಗಿ, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಇರಲಿದೆ.

Leave a Comment

Open chat
Hello 👋
Can we help you?