ಏನಿದು ನವೋದ್ಯಮ ಯೋಜನೆ? ಏನಿದರ ವಿಶೇಷತೆ?
ನವೋದ್ಯಮ ಯೋಜನೆ :ಸಾಲಕ್ಕೆ ಅರ್ಜಿ ಆಹ್ವಾನ ಹಾವೇರಿ
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ
ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ರೈತರ ನೂತನ ಪರಿ ಕಲ್ಪನೆಗಳಿಗೆ ಉತ್ತೇಜನ ನೀಡಿ ಕೃಷಿಯೊಂದಿಗೆ ಉದ್ಯಮಿ ಗಳಾಗಿ ಪರಿವರ್ತನೆ ಹೊಂದುವಂತೆ ಹಾಗೂ ರೈತರ ಆದಾಯ ವೃದ್ಧಿಸುವಲ್ಲಿ ಸಹಕಾರಿಯಾಗುವಂತೆ ರಾಜ್ಯಾ ದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆ ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡಲಾಗುವುದು.
ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿ ಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇ. 50 ರಷ್ಟು ಸಹಾಯಧನ (ಕನಿಷ್ಟ ಈ 5 ಲಕ್ಷದಿಂದ ಗರಿಷ್ಟ ಈ 20 ಲಕ್ಷಗಳವರೆಗೆ) ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುವುದು. ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಗಾಗಿ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿ ಯ ಶೇ. 50ರಷ್ಟು ಸಹಾಯಧನವನ್ನು ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುವುದು.
ಫೆ. 15 ರೊಳಗಾಗಿ ಜಂಟಿ ಕೃಷಿ ನಿರ್ದೇಶಕರು ಕೃಷಿ ಇಲಾಖೆ, ಹಾವೇರಿ ಇವರಿಗೆ ಅರ್ಜಿ ಸಲ್ಲಿಸಬೇಕು. ಅವಧಿ ಮೀರಿ ಬರುವ ಅರ್ಜಿ ಪರಿಗಣಿಸ ಲಾಗುವುದಿಲ್ಲ. ನಿಗದಿತ ಅರ್ಜಿಯಲ್ಲಿ ಹೆಚ್ಚಿನ ಮಾಹಿತಿ ಇದ್ದು, ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಿಂದ ಪಡೆಯಬಹುದು.