ಪಿಎಂ ಕಿಸಾನ್ 19ನೇ ಕಂತಿನ ಹಣ (₹2,000) ನಿಮ್ಮ ಖಾತೆ ಸೇರಲು ಇನ್ನು ಮೂರೇ ದಿನ ಬಾಕಿ. ಇದೇ ತಿಂಗಳ 24 ರಂದು ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಈ ಹಣ ಬಿಡುಗಡೆ ಮಾಡಲಿದ್ದಾರೆ. ಇ-ಕೆವೈಸಿ ಪೂರ್ಣಗೊಳಿಸಿದವರಿಗೆ ಮಾತ್ರ ಹಣ ಸಿಗುತ್ತದೆ. ಒಟ್ಟು 9.7 ಕೋಟಿ ರೈತರು ಪ್ರಯೋಜನ ಪಡೆಯಲಿದ್ದಾರೆ.
ಪಿಎಂ ಕಿಸಾನ್: eKYC ಮಾಡಿಸುವುದು ಹೇಗೆ?
eKYC ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ https://pmkisan.gov.in/aadharekyc.aspx
ಹಂತ 1- PM-Kisanನ ಅಧಿಕೃತ ವೆಬ್ಸೈಟ್ಗೆ ಹೋಗಿ.
ಹಂತ 2- ಬಲಭಾಗದಲ್ಲಿರುವ eKYC ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 3- ಆಧಾರ್ ಕಾರ್ಡ್ ಸಂಖ್ಯೆ, ಕ್ಯಾಪ್ಟಾ ಕೋಡ್ ನಮೂದಿಸಿ ಮತ್ತು ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ 4- ಆಧಾರ್ ಕಾರ್ಡ್ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ ನಮೂದಿಸಿ.
ಹಂತ 5- ‘Get OTP’ ಮೇಲೆ ಕ್ಲಿಕ್ ಮಾಡಿ ಮತ್ತು OTP ನಮೂದಿಸಿ.
OTP ಆಧಾರಿತ eKYC ಸಾಧ್ಯವಾಗದಿದ್ದರೆ, ಬಯೋಮೆಟ್ರಿಕ್ ಆಧಾರಿತ eKYCಗಾಗಿ CSC ಕೇಂದ್ರಗಳನ್ನು ಸಂಪರ್ಕಿಸಬೇಕು.
ಮಾನ್ಯ ಪ್ರಧಾನ ಮಂತ್ರಿಗಳು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19 ನೇ ಕಂತನ್ನು ಫೆಬ್ರವರಿ 24, 2025 ರಂದು ಬಿಡುಗಡೆ ಮಾಡಲಿದ್ದಾರೆ.
PMKISAN ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. OTP ಆಧಾರಿತ eKYC PMKISAN ಪೋರ್ಟಲ್ನಲ್ಲಿ ಲಭ್ಯವಿದೆ
ಅಥವಾ ಬಯೋಮೆಟ್ರಿಕ್ ಆಧಾರಿತ eKYC ಗಾಗಿ ಹತ್ತಿರದ CSC ಕೇಂದ್ರಗಳನ್ನು ಸಂಪರ್ಕಿಸಬಹುದು.