ತೇವಾಂಶ ಭರಿತ ಮೋಡ ಕಾರಣಕ್ಕೆ ರಾಜ್ಯದ ಹಲವೆಡೆ ಸುರಿಯುತ್ತಿರುವ ಬೇಸಿಗೆ ಮಳೆ, ಮುಂದಿನ 4 ದಿನ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಡಿದು ಚಿಕ್ಕಮಗಳೂರು ನಗರ ಸೇರಿ ತಾಲೂಕಿನ ಆಲ್ಲೂರು, ಕಡೂರು ತಾಲೂಕಿನ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು, ಆಲಿಕಲ್ಲು ಸಾವು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ಹಾಸನ ಜಿಲ್ಲೆ ಬೇಲೂರು ಮೂಲದ ನಾಗಮ್ಮ (65) ಮೃತಪಟ್ಟಿದ್ದಾರೆ.
ಕುರುಬರಹಳ್ಳಿಯಲ್ಲಿ ಮಗಳ ಮನೆಯ ಶುಂಠಿ ತಾಕಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ. ಮಳೆಯೊಂದಿಗೆ ಭಾರಿ ಗಾಳಿ ಬೀಸಿದ್ದರಿಂದ ವಿಜಯಪುರ ಬಡಾವಣೆಯಲ್ಲಿ ಮರದ ರೆಂಬೆಗಳು ಮುರಿದು ಬಿದ್ದಿವೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳ, ಕೇಸೂರು ಗ್ರಾಮ ಹಾಗೂ ಸುತ್ತಮುತ್ತ ಭಾನುವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ.
ತಾಪಮಾನ ಏರಿಳಿತ
ಮೋಡ ಕವಿದ ವಾತಾವರಣ ಹಾಗೂ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಳಿತವಾಗುತ್ತಿದೆ.
ಮುಂದಿನ 7 ದಿನ ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ 34-36 ಡಿ.ಸೆ., ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 35-37 ಡಿ.ಸೆ. ಹಾಗೂ ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ 38-40 ಡಿ.ಸೆ.ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ರಾಜ್ಯದ ಮಳೆ ಮುನ್ಸೂಚನೆ / ಎಚ್ಚರಿಕೆ:
ದಿನ 1 (24.03.2025):
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ದಿನ 2(25.03.2025):
ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ದಿನ 3(26.03.2025):
ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ, ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ದಿನ 4 (27.03.2025):
ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ದಿನ 5 (28.03.2025):
ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ಇದನ್ನು ಓದಿ:ನಿಮ್ಮ ದೇಹದ ತೂಕ ತುಂಬಾ ಹೆಚ್ಚಾಗಿದೆ ಕಡಿಮೆ ಮಾಡಿಕೊಳ್ಳಬೇಕಾ ಟ್ಯಾಬ್ಲೆಟ್ ಇಲ್ಲದೇನೆ ವೈಜ್ಞಾನಿಕ ರೀತಿಯಲ್ಲಿ ಬೇಗ ಸಣ್ಣ ಆಗುವುದು ಹೇಗೆ?
ಇದನ್ನು ಓದಿ:ಇಂದಿನ ಮಾರುಕಟ್ಟೆ ಬೆಲೆ ಹೇಗಿದೆ ನೋಡಿ?https://krushiyogi.com/archives/876
1 COMMENTS