ವಿವಿಧ ಕೌಶಲ್ಯ ಅಭಿವೃದ್ಧಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ಆತ್ಮೀಯ ರೈತ ಭಾಂದವರೇ,
ನಿಮ್ಮ ಕ್ರಿಯಾಶೀಲತೆಗೆ ಇನ್ನೊಂದು ಹೊಸ ಅವಕಾಶ.
ವಿವಿಧ ರೀತಿಯ ಕೌಶಲ್ಯ ಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಇಂದೇ ಅರ್ಜಿ ಸಲ್ಲಿಸಿ ಅದರ ಸದುಪಯೋಗ ಪಡೆದಿಕೊಳ್ಳಿ.ನಿಮ್ಮ ಮನೆಯಲ್ಲಿ ನಿರುದ್ಯೋಗ ಯುವಕರು ಇದ್ದರೆ ಅವರಿಗೆ ಇದು ತುಂಬಾ ಉಪಯೋಗ ಮತ್ತು ಹೊಸ ಜೀವನ ನಡೆಸಲು ದಾರಿದೀಪ ಆಗುತ್ತದೆ. ತಮ್ಮದೇ ಆದ ಸ್ವಂತ ಉದ್ಯಮ ಹೊಂದುವುದು ಈಗಿನ ಕಾಲದಲ್ಲಿ ಬಹಳ ಮುಖ್ಯವಾಗಿದೆ.ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್‌ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸ ಲಾಗಿದೆ.

18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಏಪ್ರಿಲ್ ತಿಂಗಳಲ್ಲಿ 30 ದಿನಗಳ ಕಾಲ ವಿದ್ಯುತ್ ಉಪಕರಣ ಸೇವಾ ಉದ್ಯಮಿ (ಹೋಮ್ ಅಪ್ರೈನ್ಸ್ ರಿಪೇರಿ) ತರಬೇತಿ ಹಾಗೂ ಮೇ ತಿಂಗಳಿನಲ್ಲಿ 30 ದಿನಗಳ ಕಾಲ ಮೊಬೈಲ್ ರಿಪೇರಿ ಉಚಿತ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ. ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ ನೋಂದಾಯಿಸಲು ಏಪ್ರಿಲ್ 20 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ನಿರ್ದೇಶಕರು, ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ : 9980510717, 9483485489 2 ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಇದು ಕೇವಲ ಉತ್ತರ ಕನ್ನಡ ಜಿಲ್ಲೆಗೆ ಅನ್ವಯವಾಗಿದೆ. ಸಂಬಂಧ ಪಟ್ಟವರು ಇದಕ್ಕೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದು ಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೇಲಿನ ದೂರವಾಣಿ ಸಂಖ್ಯೆಗೆ ಸಂಪರ್ಕ ಮಾಡಬಹುದು.

WhatsApp Group Join Now
Telegram Group Join Now

Leave a Comment