Karnataka Rain Alert
ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ (ಜೂನ್ 10) ಜೂನ್ 15ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್?
ಜೂನ್ 12 ಮತ್ತು 13ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಈ ಭಾಗದ ಜನರು ಅಗತ್ಯ
ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನು ಓದಿ:ಸರ್ಕಾರದಿಂದ ಮಹತ್ವದ ಘೋಷಣೆ! ಗೃಹಲಕ್ಷ್ಮಿಯರಿಗೆ ಭರ್ಜರಿ ಸುದ್ದಿ! ಮೇ ತಿಂಗಳಲ್ಲೇ ನಿಮ್ಮ ಖಾತೆಗೆ ಮೂರು ತಿಂಗಳ ಹಣ!
ಇತರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಇನ್ನು, ಜೂನ್ 13ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳು ಹೀಗಿವೆ.
- ಹಾವೇರಿ, ಧಾರವಾಡ, ಬೆಳಗಾವಿ
- ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ
- ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ
- ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು
- ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್
Thank you so much for sharing this wonderful post! Keep up the great work!